ಬ್ರಹ್ಮಾವರ : ಜೂ 17, ಮಟಪಾಡಿ ಫ್ರೆಂಡ್ಸ್ ಮಟಪಾಡಿ ಇವರ ವತಿಯಿಂದ ಶ್ರೀನಿಕೇತನ ಪ್ರೌಢ ಶಾಲಾ ೮ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣಾ ಸಮಾರಂಭ ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಮಾರಂಭದಲ್ಲಿ ಮಾತನಾಡಿದ ಶಾಲಾ ಮುಖ್ಯೋಪಧ್ಯಾಯ ಅಶೋಕ್ ಕುಮಾರ್ ಶೆಟ್ಟಿ ಅವರು, ವಿದ್ಯಾರ್ಥಿಗಳ ಕಲಿಯುವಿಕೆ ದೃಷ್ಟಿಯಲ್ಲಿ ಹಿರಿಯರ ಆಶೀರ್ವಾದ ಹಾಗೂ ಪ್ರೋತ್ಸಾಹ ಅಗತ್ಯ. ವಿದ್ಯಾರ್ಥಿಗಳು ಪದೆದುಕೊಂಡ ಸವಲತ್ತಿನಿಂದ ಉತ್ತಮ ವಿದ್ಯಾಭ್ಯಾಸ ಪಡೆದು ಮುಂದೆ ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಬೇಕು. ವಿದ್ಯಾರ್ಥಿಗಳು ಕಲಿಯುವಿಕೆಯಲ್ಲಿ ಪ್ರತಿಭಾವಂತರಾದರೆ ಸಮಾಜವು ಅವರ ಪ್ರೋತ್ಸಾಹವಾಗಿ ಮುಂದೆ ಬರುತ್ತದೆ ಈ ನಿಟ್ಟಿನಲ್ಲಿ ಕಲಿಯುವಿಕೆಯತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಕರೆ ನೀಡಿದರು.

ಬಳಿಕ ವಿದ್ಯಾರ್ಥಿಗಳಿಗೆ ಮಟಪಾಡಿ ಫ್ರೆಂಡ್ಸ್ ಅಧ್ಯಕ್ಷ ಕೃಷ್ಣಮೂರ್ತಿ ನಾಯರಿ ಸ್ಕೂಲ್ ಬ್ಯಾಗ್ ವಿತರಿಸಿದರು. ಶೆರೋನ್ ಸಿಕ್ವೇರಾ, ಶರತ್ ನಾಯಕ್, ಚೇತನ್ ಪೂಜಾರಿ, ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.