ಬ್ರಹ್ಮಾವರ : ಕ್ರಾಸ್ ಲ್ಯಾಂಡ್ ಪದವಿ ಪೂರ್ವ ಕಾಲೇಜಿಗೆ 81% brahmavara.com/pradeep shetty
ಪದವಿ ಪೂರ್ವ ಶಿಕ್ಷಣ ಇಲಾಖೆ ಕಳೆದ ಮಾರ್ಚ್ ಏಪ್ರಿಲ್ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬ್ರಹ್ಮಾವರ ಕ್ರಾಸ್ಲ್ಯಾಂಡ್ ಪದವಿ ಪೂರ್ವ ಕಾಲೇಜಿಗೆ ಶೇ.81 ಫಲಿತಾಂಶ ದೊರಕಿದೆ. ಕಾಲೇಜಿನಿಂದ ಕುಳಿತ 60 ವಿದ್ಯಾರ್ಥಿಗಳ ಪೈಕಿ 46 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 21 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು 8 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.